ಕೃಷ್ಣಬೈರೇಗೌಡ ವಿರುದ್ಧ ಭೂ ಕಬಳಿಕೆ ಆರೋಪ; ಕಂದಾಯ ಸಚಿವರ ರಾಜೀನಾಮೆ ಬಿಜೆಪಿ ಆಗ್ರಹ
ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ವಿರುದ್ಧ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವ್ರು ಭೂಕಬಳಿಕೆಯಂತಹ ಗಂಭೀರ ಆರೋಪ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ನರಸುಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮುಖಂಡ ತಮ್ಮೇಶ ಗೌಡ ಆರೋಪ ಮಾಡಿದ್ದಾರೆ.
ಕಂದಾಯ ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ದೂರಿದ್ದಾರೆ.
ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ
ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ವಿರುದ್ಧ ಬಿಜೆಪಿ ನಾಯಕ ಹಾಗೂ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಭೂಕಬಳಿಕೆಯಂತಹ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಗರುಡನಪಾಳ್ಯ ಗ್ರಾಮದಲ್ಲಿ ಇರುವ ಸುಮಾರು 21.16 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮುಖಂಡ ತಮ್ಮೇಶ ಗೌಡ ಆರೋಪಿಸಿದ್ದಾರೆ.
ಈ ಜಮೀನಿನ ಮೌಲ್ಯ ಕೋಟ್ಯಾಂತರ ರೂಪಾಯಿಗಳಾಗಿದ್ದು, ಇದು ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಭೂಮಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಂದಾಯ ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಶೇಷವಾಗಿ ಈ ಜಮೀನು ಸ್ಮಶಾನಕ್ಕೆ ಸಂಬಂಧಿಸಿದ ಭೂಮಿಯಾಗಿದ್ದು, ಕಾನೂನು ಪ್ರಕಾರ ಯಾರೂ ಸಹ ಈ ರೀತಿಯ ಭೂಮಿಯನ್ನು ಖಾಸಗಿ ಹೆಸರಿಗೆ ಮಾಡಿಕೊಳ್ಳುವಂತಿಲ್ಲ.
ಆದರೂ ಸಹ ಕೃಷ್ಣಬೈರೇಗೌಡರು ಅಕ್ರಮವಾಗಿ ಸ್ಮಶಾನ ಜಮೀನನ್ನು ತಮ್ಮ ಹೆಸರಿಗೆ ದಾಖಲಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.
21.16 ಎಕರೆ ಕೋಟ್ಯಾಂತರ ಮೌಲ್ಯದ ಜಾಗ
ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಆರೋಪಗಳನ್ನು ಮತ್ತಷ್ಟು ತೀವ್ರಗೊಳಿಸಿ, ರಾಜ್ಯದಲ್ಲಿ ಈಗಾಗಲೇ ಹಲವು ಭೂಕಬಳಿಕೆ ಹಾಗೂ ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು.
“ರಾಜ್ಯದ ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ 14 ಸೈಟುಗಳನ್ನು ಪಡೆದು ನಂತರ ವಾಪಸ್ ಕೊಟ್ಟರು. ಪ್ರಿಯಾಂಕ್ ಖರ್ಗೆ ಅವರು ಐದು ಎಕರೆ ಜಾಗ ಪಡೆದು ವಾಪಸ್ ನೀಡಿದ್ದಾರೆ.
ಆದರೆ ಕದ್ದ ವಸ್ತುವನ್ನು ವಾಪಸ್ ಕೊಟ್ಟರೆ ಅದು ಕಳ್ಳತನ ಅಲ್ಲವೇ?” ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ನೈತಿಕತೆಯನ್ನು ಪ್ರಶ್ನಿಸಿದರು.
ಭೂಮಿಯ ವಿವರಗಳನ್ನು ನೀಡಿದ ಅವರು, ಗರುಡನಪಾಳ್ಯ ಗ್ರಾಮದಲ್ಲಿನ ಸರ್ವೆ ನಂಬರ್ 17ರಲ್ಲಿ 1 ಎಕರೆ ಜಾಗ ಹಾಗೂ ಸರ್ವೆ ನಂಬರ್ 46ರಲ್ಲಿ 20.16 ಎಕರೆ ಜಾಗ ಸೇರಿ ಒಟ್ಟು 21.16 ಎಕರೆ ಭೂಮಿ ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಜಮೀನು ಸಾರ್ವಜನಿಕ ಸ್ಮಶಾನಕ್ಕೆ ಮೀಸಲಾಗಿರುವುದರಿಂದ, ಇದರ ಮೇಲೆ ಯಾವುದೇ ಖಾಸಗಿ ಹಕ್ಕು ಸಾದ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಆರೋಪಗಳು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಕುರಿತು ಸ್ಪಷ್ಟನೆ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ.
ಭೂಕಬಳಿಕೆ, ನಕಲಿ ದಾಖಲೆಗಳು ಮತ್ತು ಅಧಿಕಾರ ದುರ್ಬಳಕೆ ಆರೋಪಗಳು ಸರ್ಕಾರದ ಮೇಲೆ ಮತ್ತಷ್ಟು ಪ್ರಶ್ನಾರ್ಥಕ ಚಿಹ್ನೆ ಮೂಡಿಸುತ್ತಿವೆ.
ಮುಂದಿನ ದಿನಗಳಲ್ಲಿ ಈ ಪ್ರಕರಣ ರಾಜಕೀಯ ಹಾಗೂ ಕಾನೂನು ಮಟ್ಟದಲ್ಲಿ ಯಾವ ತಿರುವು ಪಡೆಯುತ್ತದೆ ಎಂಬುದು ಗಮನಾರ್ಹ ವಿಷಯವಾಗಿದೆ.



