ರಾಜ್ಯದಲ್ಲಿ ಬದಲಾಗುತ್ತಾ ಶಾಲೆ ಆರಂಭದ ಸಮಯ?; ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ!
ರಾಜ್ಯದಲ್ಲಿ ಶಾಳೆಗಳ ಆರಂಭದಲ್ಲಿ (School Starting Time) ಸಮಯ ಬದಲಾವಣೆ (Time Change) ಮಾಡಬೇಕು ಎಂಬ ಕೂಗು ಕೇಳಿಬಂದಿದೆ.
ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದಿದೆ. ಕರ್ನಾಟಕದಲ್ಲಿ ಚಳಿಗಾಳಿ (Cold wave) ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಶಾಲಾ ಸಮಯವನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಮಾಡಿದೆ.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದು, ಎಲ್ಕೆಜಿ ಮತ್ತು ಯುಕೆಜಿಯಿಂದ ಪಿಯುಸಿ ವರೆಗಿನ ಶಾಲೆಗಳ ಆರಂಭದ ಸಮಯ ಬದಲಾವಣೆ ಮಾಡುವಂತೆ ಮಾಡಿದ್ದಾರೆ.
ಶಾಲಾ ಆರಂಭದ ಸಮಯ ಬದಲಾವಣೆ ಮಾಡುವಂತೆ ಮನವಿ!
ರಾಜ್ಯದಲ್ಲಿ ಚಳಿಗಾಳಿ ಹೆಚ್ಚಾಗಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿ ಶಾಲಾ ಆರಂಭದ ಸಮಯ ಬದಲಾವಣೆ ಮಾಡುವಂತೆ ಕೂಗು ಕೇಳಿಬಂದಿದೆ.
ರಾಜ್ಯದಲ್ಲಿ ಚಳಿಗಾಳಿ ಮುಗಿಯುವವರೆಗೆ ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.
ಚಳಿಗಾಳಿ ಹೆಚ್ಚಾಗಿರುವುದರಿಂದ ಶಾಲಾ ಸಮಯ ಬದಲಾವಣೆಗೆ ಮನವಿ!
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು.
ಬೆಳಗ್ಗೆಯೇ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ.
ಬೆಂಗಳೂರಿನಲ್ಲೂ ಚಳಿ ಹೆಚ್ಚಾಗುತ್ತಿದ್ದು, ಮಕ್ಕಳು ಬೆಳಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆಯೋಗದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬೆಳಗ್ಗೆ 9.30ಕ್ಕೆ ಆರಂಭಿಸುವಂತೆ ಮನವಿ!
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ಅವರು ಪತ್ರದಲ್ಲಿ, “ದಿನೇ ದಿನೇ ತಾಪಮಾನ ಕುಸಿಯುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು.
ಚಳಿಗಾಳಿ ಮುಗಿಯುವವರೆಗೆ ಶಾಲೆಗಳನ್ನು ಬೆಳಗ್ಗೆ 9.30ಕ್ಕೆ ಆರಂಭಿಸುವಂತೆ ನಿರ್ದೇಶನ ನೀಡಿ” ಎಂದು ಮನವಿ ಮಾಡಿದ್ದಾರೆ. ಇದು ಮಕ್ಕಳ ಆರೋಗ್ಯ ರಕ್ಷಣೆಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ್ದಾರೆ.
ಪ್ರಸ್ತುತ ಹಲವು ಶಾಲೆಗಳು ಬೆಳಗ್ಗೆ 8 ಅಥವಾ 8.30ಕ್ಕೆ ಆರಂಭವಾಗುತ್ತಿವೆ. ಚಳಿಯಿಂದ ಮಕ್ಕಳು ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.



