ಅರ್ಜೆಂಟೈನಾದ ವಿಶ್ವಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಇಂದು (ಡಿಸೆಂಬರ್ 13) ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆ ವಿವೇಕಾನಂದ ಯುವಭಾರತಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಆದರೆ. ಈ ವೇಳೆ ಬಾಟಲಿಗಳ ತೂರಿದ ಘಟನೆ ನಡೆದಿದ್ದು, ಇದು ಇಡೀ ದೇಶದ ಗಮನ ಸೆಳದಿದೆ.
ಫುಟ್ಬಾಲ್ ಸೂಪರ್ಸ್ಟಾರ್ ಲಿಯೋನೆಲ್ ಮೆಸ್ಸಿಯವರ ಬಹುನಿರೀಕ್ಷಿತ ಕೋಲ್ಕತ್ತಾ ಪ್ರವಾಸ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳು ಆಕ್ರೋಶಗೊಂಡು ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಮೆಸ್ಸಿ ಅವರನ್ನು ವೀಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಕೋಪಗೊಂಡ ವೀಕ್ಷಕರು ಮೈದಾನಕ್ಕೆ ಬಾಟಲಿಗಳನ್ನು ಎಸೆದು, ಬ್ಯಾನರ್ಗಳು ಮತ್ತು ಆಸನಗಳನ್ನು ಸಹ ಕಿತ್ತೆಸೆದಿರುವ ಘಟನೆ ನಡೆದಿದೆ. ಇದೇ ವೇಳೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದ್ದಾರೆ. ತಾವು ಮಾತ್ರ ಅವರನ್ನು ಭೇಟಿ ಮಾಡಿ ಹಸ್ತಕ್ಷಾರ ಪಡೆಯಬಹುದು. ಆದರೆ, ನಾವು ಅವರನ್ನು ನೋಡಲು ಕೂಡ ಅವಕಾಶ ಮಾಡಿಕೊಡದಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಅಭಿಮಾನಿಗಳ ಆಕ್ರೋಶದಿಂದ ಸ್ಥಳದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಯಿತು. ಮೆಸ್ಸಿ ಅವರನ್ನು 10 ನಿಮಿಷಗಳಿಗಿಂತ ಕಡಿಮೆ ಕಾಲ ಕ್ರೀಡಾಂಗಣದೊಳಗೆ ಇರಿಸಲಾಗಿತ್ತು. ಬಳಿಕ ಅವರನ್ನು ಹೊರಗಡೆ ಕರೆದುಕೊಂಡು ಬರಲಾಯಿತು. ಇದೇ ವಿಚಾರಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ಬಾಟಲಿ ಹಾಗೂ ಕಲ್ಲುಗಳನ್ನು ತೂರಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.




Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exerction ullamco laboris 2