ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಪಾಲಿಕೆಗಳು ವಿವಿಧ ಹೊಸ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದೀಗ ಬೆಂಗಳೂರಿನ ದಕ್ಷಿಣ ನಗರ ಪಾಲಿಕೆಯಿಂದಲೂ ವಿನೂತನ ಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್ ರಮೇಶ್ ಅವರು ಶುಕ್ರವಾರ (ಡಿಸೆಂಬರ್ 19) ಜಯನಗರ ವಲಯ ವ್ಯಾಪ್ತಿಯಲ್ಲಿನ ಅಪಾರ್ಟ್ಮೆಂಟ್ ಹಾಗೂ ಸ್ಥಳೀಯ ನಿವಾಸಿಗಳ ಸಂಘ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ನಿವಾಸಿಗಳ ಪ್ರಮುಖ ಕುಂದುಕೊರತೆಗಳ ಕುರಿತು ಚರ್ಚಿಸಲು ಸಭೆಗೆ ಆಹ್ವಾನಿಸಿದ್ದರು. ಸಭೆಯಲ್ಲಿ ಸ್ಥಳೀಯ ನಿವಾಸಿಗಳ ಸಂಘದ ಪದಾಧಿಕಾರಿಗಳು ಪಾದಚಾರಿ...
