'ಗೃಹಲಕ್ಷ್ಮಿ' ಜಟಾಪಟಿ; ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ನಿಂತು ಸಿಎಂ ಇಲಾಖೆಯನ್ನೇ ದೂರಿದ ಡಿಕೆ ಶಿವಕುಮಾರ್! ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಸಂಬಂಧವಾಗಿ ವಿಧಾನಸಭೆ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿರೋಧ ಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದರು. ಈ ವಿಚಾರವಾಗಿ ಇಂದು (ಡಿ.17) ಅವರು ಸದನದಲ್ಲೇ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಮುಂದಿನ ದಿನಗಳಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಜವಾಬ್ದಾರಿಯಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಆದರೆ ಸಚಿವೆಯ...
